Ballary Dist

ಬಳ್ಳಾರಿ ಜಿಲ್ಲೆ:

             ಬಳ್ಳಾರಿ ಕರ್ನಾಟಕ ರಾಜ್ಯದ ಒಂದು ಪ್ರಮುಖ ಜಿಲ್ಲೆ; ಇದೇ ಹೆಸರಿನ ನಗರ ಜಿಲ್ಲೆಯ ರಾಜಧಾನಿ.ಚಾರಿತ್ರಿಕವಾಗಿ, ಬಳ್ಳಾರಿ ಜಿಲ್ಲೆಗೆ ಪ್ರಾಮುಖ್ಯತೆಗೆ ಬಂದದ್ದು ವಿಜಯನಗರ ಸಾಮ್ರಾಜ್ಯದ ಕಾಲದಲ್ಲಿ. ಇದಕ್ಕೆ ಮೊದಲು ಈ ಪ್ರದೇಶ ಶಾತವಾಹನ, ಕಲ್ಯಾಣಿ ಚಾಲುಕ್ಯರು, ಕದಂಬರು, ಸೇವುಣರು ಮತ್ತು ಹೊಯ್ಸಳರ ನಿಯಂತ್ರಣದಲ್ಲಿತ್ತು. ವಿಜಯನಗರ ಸಾಮ್ರಾಜ್ಯ ಬಳ್ಳಾರಿ ಜಿಲ್ಲೆಯಲ್ಲೇ ರಾಜಧಾನಿಯನ್ನು ಹೊಂದಿದ್ದರಿಂದ ಆ ಸಮಯದಲ್ಲಿ ಈ ಜಿಲ್ಲೆ ಪ್ರಾಮುಖ್ಯತೆಗೆ ಬಂದಿತು. ಬ್ರಿಟಿಷ್ ಆಡಳಿತದ ಕಾಲದಲ್ಲಿ ಮದರಾಸು ಪ್ರಾಂತ್ಯಕ್ಕೆ ಸೇರಿದ್ದ ಬಳ್ಳಾರಿ ಜಿಲ್ಲೆ ೧೯೫೩ ರಲ್ಲಿ ಮೈಸೂರು ರಾಜ್ಯಕ್ಕೆ ವರ್ಗಾಯಿಸಲ್ಪಟ್ಟಿತು.

              ಬಳ್ಳಾರಿ ಜಿಲ್ಲೆಯ ಪ್ರಸಿದ್ಧ ಸ್ಥಳಗಳಲ್ಲಿ ಹಂಪೆ ಮತ್ತು ಅಲ್ಲಿರುವ ವಿಜಯನಗರ ಸಾಮ್ರಾಜ್ಯದ ಅವಶೇಷಗಳು ಮುಖ್ಯವಾದವು. ಬಳ್ಳಾರಿ ಜಿಲ್ಲೆಯ ಇನ್ನೊಂದು ಪ್ರಮುಖ ಪಟ್ಟಣ ಎಂದರೆ ಹೊಸಪೇಟೆ - ಇಲ್ಲಿರುವ ತುಂಗಭದ್ರಾ ಅಣೆಕಟ್ಟು ಕೃಷಿಗೆ ನೀರನ್ನು ಒದಗಿಸುತ್ತದೆ. ಬೊಮ್ಮಘಟ್ಟ ಇಲ್ಲಿಯ ಶ್ರೀ ಹುಲಿಕುಂಟೇರಾಯ ದೇವಸ್ಥಾನವು ಪ್ರಸಿದ್ಧವಾಗಿದೆ. ಇಲ್ಲಿ ಪ್ರತೀ ವರ್ಷ ಪಾಲ್ಗುಣ ಶುಕ್ಲದ ದಶಮಿಯಂದು ರಥೋತ್ಸವ ಇರುತ್ತದೆ ಹಾಗೂ ಸಂಡೂರು ತಾಲೂಕಿನ ಸೋವೇನಹಳ್ಳಿಯಲ್ಲಿ ಸಾರಿದುರ್ಗಾಂಭ ಹಾಗೂ ಶ್ರೀ ಸಿದ್ದಲಿಂಗೇಶ್ವರ ರಥೋತ್ಸವಗಳು ವೈಭವದಿಂದ ಜರುಗುತ್ತವೆ.


Refine Search


Showing 1 to 1 of 1 (1 Pages)