Chikli Hole Dam

ಚಿಕ್ಲಿಹೊಳೆ ಜಲಾಶಯ:

                ದುಬಾರೆಯಿಂದ ಸುಂಟಿಕೊಪ್ಪದ ಕಡೆಗಿನ ರಸ್ತೆಯಲ್ಲಿ ಸಾಗಿದರೆ ಚಿಕ್ಲಿಹೊಳೆ ಜಲಾಶಯವನ್ನು ತಲುಪಬಹುದು. ಈ ಜಲಾಶಯವನ್ನು ಕುಶಾಲನಗರ ಹಾಗೂ ಪಿರಿಯಾಪಟ್ಟಣ ವ್ಯಾಪ್ತಿಯ ಸುಮಾರು 18ಗ್ರಾಮಗಳ 862 ಹೆಕ್ಟೇರ್ ಪ್ರದೇಶಕ್ಕೆ ನೀರನ್ನು ಒಗದಿಸುವ ಉದ್ದೇಶದಿಂದ ಕಾವೇರಿ ನದಿಯ ಉಪನದಿಯಾದ ಚಿಕ್ಲಿಹೊಳೆಗೆ 1982ರಲ್ಲಿ ಸುಮಾರು 12ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆದರೆ ಬ್ತಿಟಿಷರ ಕಾಲದಲ್ಲಿಯೇ ಕೃಷಿಗೆ ನೀರು ಹರಿಸಲು ಇಲ್ಲಿ ಹೊಳೆಗೆ ಅಡ್ಡಲಾಗಿಕಟ್ಟೆ ನಿರ್ಮಿಸಲಾಗಿತ್ತು ಎನ್ನಲಾಗಿದೆ. ಸ್ವಾತಂತ್ರ್ಯ ನಂತರ 1978ರಲ್ಲಿ ಶಂಕುಸ್ಥಾಪನೆ ನೆರವೇರಿಸಿ 1982ರಲ್ಲಿ ಜಲಾಶಯ ನಿರ್ಮಾಣವಾಯಿತು. ಒಂದೆಡೆ ಕಾಫಿತೋಟ ಮತ್ತೊಂದೆಡೆ ಅರಣ್ಯ ಇದರ ನಡುವಿನ ಪ್ರಕೃತಿಯ ಮಡಿಲಲ್ಲಿ ನಿರ್ಮಾಣಗೊಂಡ ಜಲಾಶಯ ಪ್ರವಾಸಿಗರನ್ನು ಸೂಜಿಗಲ್ಲಿನಂತೆ ಸೆಳೆಯುತ್ತದೆ.