Cauvery Nisargadhama

ಕಾವೇರಿ ನಿಸರ್ಗಧಾಮ:

                               ಕುಶಾಲನಗರದಿಂದ ಮಡಿಕೇರಿ ಕಡೆಗಿನ ಮುಖ್ಯರಸ್ತೆಯಲ್ಲಿ ಸುಮಾರು ಒಂದೂವರೆ ಕಿ.ಮೀ. ಸಾಗಿದರೆರಸ್ತೆಯಎಡಭಾಗದಲ್ಲಿಯೇ ನಿಸರ್ಗಧಾಮದ ಪ್ರವೇಶದ್ವಾರ ಕಾಣಸಿಗುತ್ತದೆ. 1989 ರಲ್ಲಿ ನಿರ್ಮಿಸಲ್ಪಟ್ಟಕಾವೇರಿ ನಿಸರ್ಗಧಾಮಅಲ್ಲಿಂದಇಲ್ಲಿಯವರೆಗೆದೇಶ, ವಿದೇಶಗಳ ಲಕ್ಷಾಂತರ ಪ್ರವಾಸಿಗರನ್ನು ತನ್ನತ್ತ ಸೆಳೆಯುವಲ್ಲಿ ಯಶಸ್ವಿಯಾಗಿದೆ.

                              ನಿಸರ್ಗಧಾಮದ ಪ್ರವೇಶದ್ವಾರದ ಮೂಲಕ ತೂಗು ಸೇತುವೆಯ ಮೇಲೆ ಹೆಜ್ಜೆ ಹಾಕುತ್ತಾ ಮುನ್ನಡೆದರೆ ನಿಸರ್ಗದಕೌತುಕಮಯ ದೃಶ್ಯಗಳು ಕಣ್ಮುಂದೆ ಬಂದು ನಿಲ್ಲುತ್ತದೆ. ತಳುಕಿ ಬಳುಕಿ ಝುಳು ಜುಳು8 ಎನ್ನುತ್ತಾ ಹರಿಯುವ ಕಾವೇರಿ ನದಿ...... ಬೀಸುವ ತಂಗಾಳಿ....... ಪ್ರಕೃತಿಯ ಸೋಜಿಗ ಮೈ ಪುಳಕಗೊಳಿಸುತ್ತದೆ. ಇಲ್ಲಿ ಮಾರ್ಗ ಸೂಚಿ ಫಲಕಗಳಿದ್ದು, ನಿಸರ್ಗಧಾಮದ ಬಗ್ಗೆ ಮಾಹಿತಿ ನೀಡುತ್ತದೆ. ಅರಣ್ಯ ಇಲಾಖೆಯು ಪ್ರವಾಸಿಗರ ಅನುಕೂಲಕ್ಕಾಗಿ ಉಪಹಾರಗೃಹವನ್ನು ತೆರೆದಿದ್ದು ಇದರ ಸಮೀಪವೇ ಮಕ್ಕಳ ವಿಹಾರಧಾಮವಿದೆ.

                             ಇಲ್ಲಿ ನಿಗದಿತ ಹಣವನ್ನು ನೀಡಿ ಆನೆಯ ಮೇಲೆ ಕುಳಿತು ಸವಾರಿಯನ್ನು ಮಾಡಬಹುದು. ಆನೆ ಸವಾರಿ ಪಕ್ಕದಲ್ಲಿಯೇ ಜಿಂಕೆವನವಿದೆ. ಸುಮಾರು 5 ಎಕರೆ ಪ್ರದೇಶದಲ್ಲಿ ಸುತ್ತಲೂ ಸುಸಜ್ಜಿತವಾಗಿ ತಂತಿ ಬೇಲಿ ಹಾಕಿ ನಿರ್ಮಿಸಲಾಗಿರುವ ಈ ವನದಲ್ಲಿ ಹಲವಾರು ಜಿಂಕೆ, ಕಡವೆಗಳಿವೆ. ಕಾಲು ದಾರಿಯಲ್ಲಿ ಹೆಜ್ಜೆ ಮಾಡುತ್ತಾ ಮುನ್ನಡೆದರೆ ಮರದಿಂದ ನಿರ್ಮಿಸಲಾಗಿರುವ ಕುಟೀರಗಳು ಮನಸೆಳೆಯುತ್ತವೆ. ಈ ಕುಟೀರಗಳಿಗೆ ಹತ್ತಲು ಏಣಿಗಳನ್ನು ನಿರ್ಮಿಸಿದ್ದು, ಇದರಲ್ಲಿ ಕುಳಿತು ವಿಶ್ರಾಂತಿ ಪಡೆಯಬಹುದು. ನಿಸರ್ಗದ ಚೆಲುವನ್ನು ಸವಿಯುತ್ತಾ ಅಲ್ಲಿಯೇ ತಂಗುವುದಾದರೆ ಅದಕ್ಕೂ ವ್ಯವಸ್ಥೆಯಿದೆ. ಇಟ್ಟಿಗೆಗೋಡೆ, ತೇಗದ ಮರ, ಹುಲ್ಲಿನ ಛಾವಣಿಯಿಂದ ನಿರ್ಮಿಸಲಾದಂತಹ ಐದು ಕಾಟೇಜ್ಗಳಿದ್ದು, ಇವುಗಳಿಗೆ ನಿಗದಿತ ಶುಲ್ಕ ಪಾವತಿಸಬೇಕಾಗುತ್ತದೆ. ಪ್ರವಾಸಿಗರಿಗಾಗಿಯೇ ಇಲ್ಲೊಂದು ಮಾಹಿತಿ ಕೇಂದ್ರವನ್ನು ಕೂಡ ನಿರ್ಮಿಸಲಾಗಿದೆ. ಕಾವೇರಿ ನಿಸರ್ಗಧಾಮವು ಎಲ್ಲಾ ರೀತಿಯಿಂದಲೂ ಪ್ರವಾಸಿಗರನ್ನು ಆಕರ್ಷಿಸುತ್ತಿದ್ದು, ಇಲ್ಲಿ ಇನ್ನಷ್ಟು ಅಭಿವೃದ್ದಿ ಕಾರ್ಯಕ್ರಮಗಳನ್ನು ನಡೆಸಬೇಕಾದ ಅಗತ್ಯವಿದೆ. ನಿಸರ್ಗಧಾಮವು ನಿರ್ಮಾಣಗೊಂಡಿರುವ ದ್ವೀಪವು ಸುಮಾರು 65ಎಕರೆ ಪ್ರದೇಶವನ್ನು ಹೊಂದಿದ್ದು ಕೇವಲ 15 ಎಕರೆ ಪ್ರದೇಶದಲ್ಲಿ ಮಾತ್ರ ವಿವಿಧ ಸವಲತ್ತುಗಳನ್ನು ಕಲ್ಪಿಸಿ ನಿಸರ್ಗಧಾಮವನ್ನು ನಿರ್ಮಿಸಲಾಗಿದೆ.


ad4
ad14
ad2
ad9
ad7
ad10
ad12
ad8
ad12
ad5
ad11
ad8
ad6
ad1
ad3

Related Information