Dubaare Elephant Camp

ದುಬಾರೆ:

                ದುಬಾರೆ ಪ್ರವಾಸಿಗರಿಗೆ ಸ್ವರ್ಗವಾಗಿದೆ. ಕುಶಾಲನಗರದಿಂದ ಸುಮಾರು 18 ಕಿ.ಮೀ ದೂರದಲ್ಲಿದೆ. ಸಿದ್ದಾಪುರ ರಸ್ತೆಯಲ್ಲಿ ಸಾಗಿದಾಗ ಸಿಗುವ ನಂಜರಾಯಪಟ್ಟಣದಿಂದ ಎಡಕ್ಕೆ ತಿರುಗಿದರೆ ಅಲ್ಲಿಂದ ಸುಮಾರು 1ಕಿ.ಮೀ ದೂರದಲ್ಲಿ ದುಬಾರೆ ಸಿಗುತ್ತದೆ. ಪ್ರತಿದಿನವೂ ಪ್ರವಾಸಿಗರಿಂದ ತುಂಬಿ ತುಳುಕುವ ದುಬಾರೆ ಇವತ್ತು ದುಬಾರೆ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದಿದೆ. ದೋಣಿಯಲ್ಲಿ ವಿಹರಿಸಿ, ಆನೆ ಸಫಾರಿ ಮಾಡಿ ಒಂದಷ್ಟು ಹೊತ್ತು ನಿಸರ್ಗದ ಮಡಿಲಲ್ಲಿ ಮೈಮರೆತು ನೀರಾಟವಾಡಿ ತಮ್ಮ ಊರುಗಳಿಗೆ ಹಿಂದಿರುಗುವ ಪ್ರವಾಸಿಗರಿಗೆ ದುಬಾರೆ ಒಂದು ಅದ್ಬುತ ತಾಣ.

                      ಆನೆ ಶಿಬಿರದಲ್ಲಿ ಎರಡು ಮರಿ ಆನೆಗಳು ಸೇರಿದಂತೆ ಸುಮಾರು 17 ಸಾಕಾನೆಗಳಿವೆ. ಇವುಗಳೇ ಇಲ್ಲಿನ ಪ್ರಮುಖ ಆಕರ್ಷಣೆ ಎಂದರೆ ತಪ್ಪಾಗುವುದಿಲ್ಲ. ದೂರದಿಂದ ಹೆಚ್ಚಿನ ಪ್ರವಾಸಿಗರು ಈ ಆನೆಗಳನ್ನು ನೋಡಲೆಂದೇ ಬರುತ್ತಾರಲ್ಲದೆ, ಕೆಲವರು ಆನೆ ಸವಾರಿಸವಾರಿ ಮಾಡಿದರೆ ಮತ್ತೆ ಕೆಲವರು ಅವುಗಳಿಗೆ ನೀಡುವ ಆಹಾರ ಹಾಗೂ ಗಜಮಜ್ಜನವನ್ನು ನೋಡಿ ಆನಂದಪಡುತ್ತಾರೆ. ದುಬಾರೆ ಆನೆ ಶಿಬಿರದಲ್ಲಿರುವ ಸಾಕಾನೆಗಳೆಲ್ಲೂ ಅರಣ್ಯ ಇಲಾಖೆ ಆಧೀನದಲ್ಲಿವೆಯಾದರೂ ಇಲ್ಲಿ ಆನೆ ಸಫಾರಿಯ ಉಸ್ತುವಾರಿಯನ್ನು ಜಂಗಲ್  ಲಾಡ್ಜ್ನನವರು ವಹಸಿಕೊಂಡಿದ್ದಾರೆ.

                    ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಆನೆ ಸಫಾರಿ ನಡೆಯುತ್ತದೆ. ಸುಮಾರು 12,757 ಎಕರೆ ವಿಸ್ತೀರ್ಣ ಹೊಂದಿರುವದುಬಾರೆಅರಣ್ಯ ಪ್ರದೇಶದಲ್ಲಿತಲತಲಾಂತರದಿಂದಗಿರಿಜನರು ವಾಸಿಸುತ್ತಾ ಬಂದಿದ್ದಾರೆ. ಹಿಂದೆ ಇಲ್ಲಿ ಖೆಡ್ಡಾದ ಅಥವಾ ಪುಂಡಾನೆಗಳನ್ನು ಹಿಡಿದು ಪಳಗಿಸಲಾಗುತ್ತಿತ್ತು.

ad8
ad12
ad5
ad11
ad8
ad6
ad4
ad14
ad2
ad9
ad7
ad10
ad12
ad1
ad3

Related Information