GoldenTemple

ಗೋಲ್ಡನ್‍ ಟೆಂಪಲ್  :           

                     ಗೋಲ್ಡನ್‍ ಟೆಂಪಲ್ ಕುಶಾಲನಗರಕ್ಕೆ ಸಮೀಪದಲ್ಲಿದ್ದು, ಮೈಸೂರು ಜಿಲ್ಲೆಗೆ ಸೇರಿರುವ ಬೈಲಕುಪ್ಪೆಯ  ಪ್ರಸಿದ್ದ ತಾಣವಾಗಿದೆ. ಇಲ್ಲಿ ಸ್ವರ್ಣ ದೇಗುಲದೊಂದಿಗೆ ಸುಮಾರು ಹದಿನಾರಕ್ಕೂ ಹೆಚ್ಚು ವಿವಿಧ ದೇಗುಲಗಳು, ಧ್ಯಾನಕೇಂದ್ರ, ಸನ್ಯಾಸಿನಿಯರ ಬೌದ್ದವಿಹಾರ, ಬೌದ್ದ ಭಿಕ್ಷುಗಳ ಮಹಾವಿದ್ಯಾಲಯ, ಆಸ್ಪತ್ರೆ, ಬೌದ್ದವಿಹಾರದ ಸುತ್ತ 1300 ಪ್ರಾರ್ಥನಾ ಚಕ್ರಗಳು, ಎಂಟು ಸ್ಥೂಪಗಳು ತನ್ನದೇ ವೇಶಿಷ್ಟ್ಯತೆಯಿಂದ ಪ್ರವಾಸಿಗರನ್ನು ಸೆಳೆಯುತ್ತಿದೆ.

                     ಟಿಬೆಟ್‍ ದೇಶದ ಸಂಪ್ರದಾಯಗಳಿಗೆ ತಕ್ಕಂತೆ ನಿರ್ಮಾಣಗೊಂಡಿರುವುದು ಸ್ವರ್ಗಾದೇಗುಲದ ವಿಶೇಷತೆಯಾಗಿದೆ. ಪರಮ ಪೂಜ್ಯ ಪನೋರ್‍ರಿನ್ ಪೋಚೆಯವರು ಇದರ ನಿರ್ಮಾಣವನ್ನು 1995ರಲ್ಲಿ ಆರಂಭಿಸಿ 1999ರಲಿ ಪೂರ್ಣಗೊಳಿಸಿದರು. ದೇವಾಲಯ ಉತ್ಕಷ್ಟ ಶಿಲ್ಪಕಲೆಯಿಂದ ಕೂಡಿದ ಮಂದಿರವಾಗಿದ್ದು. ಕಲೆಗೆ ಚಿನ್ನದ ಲೇಪನ ಮೆರುಗು ನೀಡಿದೆ.

                      ವಿಶಾಲ ಹಜಾರವನ್ನು ಹೊಂದಿರುವ ದೇವಾಲಯದ ಪೀಠದಿಂದಲೇ ಅರವತ್ತು ಅಡಿ ಎತ್ತರದ ಭಗವಾನ್ ಬುದ್ದನ ಮೂರ್ತಿ, ಐವತ್ತೆಂಟು ಅಡಿ ಎತ್ತರದ ಗುರು ಪದ್ಮಸಂಭವ ಹಾಗೂ ಬುದ್ದ ಅಮಿತಾಯುಸ್ನ ಮೂರು ಬೃಹತ್ ಪ್ರಧಾನ ಮೂರ್ತಿಗಳಿದ್ದು, ಇವುಗಳನ್ನು ಚೆನ್ನಲೇಪಿತ ತಾಮ್ರದ ಲೋಹದಿಂದ ನಿರ್ಮಿಸಲಾಗಿದೆ.